Sunday, September 13, 2026

BDA Apartments

ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಕೈ ಅಭ್ಯರ್ಥಿ ಗೆಲುವು ಅಷ್ಟೇ ಸ...
Home Front Page ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಕೈ ಅಭ್ಯರ್ಥಿ ಗೆಲುವು ಅಷ್ಟೇ ಸತ್ಯ- ಮಾಜಿ ಸಿಎಂ...

ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಕೈ ಅಭ್ಯರ್ಥಿ ಗೆಲುವು ಅಷ್ಟೇ ಸತ್ಯ- ಮಾಜಿ ಸಿಎಂ ಸಿದ್ಧರಾಮಯ್ಯ.

ಹಾವೇರಿ,ಅಕ್ಟೋಬರ್,22,2021(www.justkannada.in): ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ  ಹಾನಗಲ್  ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವು ಅಷ್ಟೇ ಸತ್ಯ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಹಾನಗಲ್ ನ ನರೇಗಲ್ ನಲ್ಲಿ ಮಾತನಾಡಿದ  ಮಾಜಿ ಸಿಎಂ ಸಿದ್ಧರಾಮಯ್ಯ, ಶ್ರೀನಿವಾಸ್ ಮಾನೆ ಗೆಲ್ತಾರೆಂದು ನೀವೇ ಹೇಳಿದ್ದೀರಿ. ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ ಶ್ರೀನಿವಾಸ್ ಮಾನೆ ಗೆಲ್ಲೋದು ಅಷ್ಟೇ ಸತ್ಯ ಎಂದು ನುಡಿದರು.

ಇದಕ್ಕೂ ಮುನ್ನ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂಬುದು ಸಿಎಂ ಬೊಮ್ಮಾಯಿಗೂ ಗೊತ್ತು, ಸಚಿವ ನಿರಾಣಿಗೂ ಗೊತ್ತು. ಅಲ್ಲಿ ಕಮಲ ಪಾಳಯಕ್ಕೆ ಸೋಲು ನಿಶ್ಚಿತ. ಹಾನಗಲ್ ನಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ಹಣ ಹಂಚಿಕೆ ಮಾಡಿ ಮತದಾರರನ್ನು ಸೆಳೆದು ಗೆಲ್ಲಬೇಕು ಎಂಬ ಜಿದ್ದಿಗೆ ಬಿದ್ದಿದ್ದಾರೆ. ಬಿಜೆಪಿ ಹಣ ಹಂಚುವ ಬಗ್ಗೆ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

Key words: hanagal-by-election-congress-candidate- win-former CM- Siddaramaiah