Thursday, August 6, 2026

BDA Apartments

Home Front Page ಮಾಜಿ ಸಚಿವ ಸಿ.ಟಿ ರವಿ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಸಿದ್ದರಾಮಯ್ಯ ಅಭಿಮಾನಿಗಳು ಒತ್ತಾಯ.

ಮಾಜಿ ಸಚಿವ ಸಿ.ಟಿ ರವಿ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಸಿದ್ದರಾಮಯ್ಯ ಅಭಿಮಾನಿಗಳು ಒತ್ತಾಯ.

ಮೈಸೂರು,ಅಕ್ಟೋಬರ್,28,2021(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಟ್ವಿಟ್ ಮಾಡಿದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಒತ್ತಾಯ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅಭಿಮಾನ ಬಳಗದ ಅಧ್ಯಕ್ಷ ಹಿನಕಲ್ ಪ್ರಕಾಶ್,  ಸಿದ್ದರಾಮಯ್ಯ ಬಗ್ಗೆ ಮಾತನಾಡಲು ಸಿ.ಟಿ ರವಿಗೆ ಯೋಗ್ಯತೆ ಇಲ್ಲ. ಸಿ.ಟಿ ರವಿ ಒಬ್ಬ ಮಾನಸಿಕ ಅಸ್ವಸ್ಥ, ಬುದ್ದಿಗೇಡಿ. ಆತನಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ ಎಂದು ಕಿಡಿಕಾರಿದರು.former-minister-ct-ravi-siddaramaiah-statement-hanuma-born

ಅಲ್ಲದೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರಿಗೆ ಆಗ್ರಹಿಸಿದರು.

Key words: Siddaramaiah- fans- urged -former minister- CT Ravi – apologize-mysore