Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬೆಂಗಳೂರು, ನವೆಂಬರ್ 1, 2021 (www.justkannada.in): ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಡಿನ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದಕ್ಕೆ ಪ್ರಧಾನಿ ಮೋದಿಯೂ ಕೈ ಜೋಡಿಸಿದ್ದು, ಶುಭಾಶಯ ಕೋರಿದ್ದಾರೆ.

ಟ್ವೀಟರ್ ನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು.

ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಆಶಿಸಿದ್ದಾರೆ.