Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ.

ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ.

ಬೆಂಗಳೂರು,ನವೆಂಬರ್,3,2021(www.justkannada.in):  ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಎಸ್.ಸಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಜಮಾಯಿಸಿದ ಬಿಜೆಪಿ ಎಸ್.ಸಿ ಯುವ ಮೋರ್ಚಾ ಕಾರ್ಯಕರ್ತರು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಶಾಸಕ ಪಿ.ರಾಜೀವ್, ಛಲವಾದಿ ನಾರಾಯಣಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಶಾಸಕ ಪಿ.ರಾಜೀವ್, ಸಿದ್ಧರಾಮಯ್ಯ ಹೊಟ್ಟೆ ಪಾಡಿಗಾಗಿ ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಸೇರಿಕೊಂಡರು. ನಿಮ್ಮಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. ಹೇಳಿಕೆ ಬಗ್ಗೆ ಸಿದ್ಧರಾಮಯ್ಯ ಕ್ಷಮೆಯಾಚಿಸಬೇಕು. ಇಲ್ಲದಿದ್ದರೇ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Key words: Former CM –Siddaramaiah-statement-protests – BJP