Tuesday, August 25, 2026

BDA Apartments

Home Front Page ಬಿಟ್ ಕಾಯಿನ್ ಪ್ರಕರಣ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಿ-ವಾಟಾಳ್ ನಾಗರಾಜ್ ಆಗ್ರಹ.

ಬಿಟ್ ಕಾಯಿನ್ ಪ್ರಕರಣ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಿ-ವಾಟಾಳ್ ನಾಗರಾಜ್ ಆಗ್ರಹ.

ಮೈಸೂರು,ನವೆಂಬರ್,11,2021(www.justkannada.in): ರಾಜ್ಯದಲ್ಲಿ ಸದ್ಧು ಮಾಡುತ್ತಿರುವ ಬಿಟ್ ಕಾಯಿನ್ ದಂಧೆ ಬಗ್ಗೆ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,  ಅಯ್ಯೋ ನನಗೆ ಬಿಟ್ ಕಾಯಿನ್ ಅಂದ್ರೇನೇ ಗೊತ್ತಿಲ್ಲ. ಅದೇನಿದ್ರೂ ದರೋಡೆಕೋರರಿಗೆ ಮಾತ್ರ ಗೊತ್ತು ಎಂದು ಲೇವಡಿ ಮಾಡಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ  ಖಂಡಿಸಿ ಮೈಸೂರಿನ ಜಯಚಾಮರಾಜೇಂದ್ರ ವೃತ್ತದ ಬಳಿ ಸಾರ್ವಜನಿಕರಿಗೆ ಉಚಿತವಾಗಿ ಕಡಲೆಕಾಯಿ ನೀಡುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹೋಟೆಲ್ ಊಟ ತಿಂಡಿಗಳಲ್ಲೂ ಬೆಲೆ ಏರಿಕೆಯಾಗಿದೆ. ಹೀಗಾಗಿ ಇದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.

ಬಿಟ್ ಕಾಯಿನ್ ವಿಚಾರ ಕುರಿತು ಮಾತನಾಡಿದ ವಾಟಾಳ್ ನಾಗರಾಜ್, ಬಿಟ್  ಕಾಯನ್ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಯಾರೇ ಶಾಮೀಲಾಗಿದ್ರೂ ಕ್ರಮ ಕೈಗೊಳ್ಳಬೇಕು. ಎಂದು ಆಗ್ರಹಿಸಿದರು.

ಪರಿಷತ್ ಚುನಾವಣೆ: ಕಾಂಗ್ರೆಸ್ ನವರು ನನಗೆ ಒಂದು ಸ್ಥಾನ ಬಿಟ್ಟುಕೊಡಬೇಕು.

ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಹಿನ್ನಲೆ, ಕಾಂಗ್ರೆಸ್ ನವರು ನನಗೆ ಒಂದು ಸ್ಥಾನ ಬಿಟ್ಟುಕೊಡಬೇಕು. ಹಿಂದಿನಿಂದಲೂ ನಾನು ಕಾಂಗ್ರೆಸ್ ಗೆ ಬೆಂಬಲಿಸಿದ್ದೇನೆ. ಎಸ್.ಎಂ ಕೃಷ್ಣ, ರಾಜಶೇಖರ ಮೂರ್ತಿ, ಧೃವನಾರಾಯಣ್ ಅವರಿಗೆ ಮತ ಹಾಕಿದ್ದೀನಿ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ನನ್ನನ್ನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಮೈಸೂರು ಭಾಗದ ಜನರು ಒತ್ತಾಯ ಮಾಡಿದ್ರು. ಹೀಗಾಗಿ  ಮೈಸೂರಿನ ಎರಡು ಸ್ಥಾನಗಳಲ್ಲಿ ನನ್ನನ್ನ ಒಂದಕ್ಕೆ ನನ್ನನ್ನು ಬೆಂಬಲಿಸಬೇಕು. ನಾನು 60 ವರ್ಷಗಳಿಂದ ಕನ್ನಡ ಪರ ಹೋರಾಟಗಾರ. ನಾನು ಕಾಂಗ್ರೆಸ್ ನಿಂದ ಟಿಕೆಟ್ ಕೇಳುವುದು ಸೂಕ್ತವಲ್ಲ ಎಂದರು.

Key words: BitCoin -case -seriously – CBI –investigation-Vatal Nagaraj -mysore