Saturday, August 22, 2026

BDA Apartments

Home Front Page ಕಮಲ ಪಕ್ಷದ ನಾಯಕರ ವಿರುದ್ಧ ಸರಣಿ ಟ್ವೀಟ್ ಅಸ್ತ್ರ ಬಳಸಿದ ಎಚ್ಡಿಕೆ

ಕಮಲ ಪಕ್ಷದ ನಾಯಕರ ವಿರುದ್ಧ ಸರಣಿ ಟ್ವೀಟ್ ಅಸ್ತ್ರ ಬಳಸಿದ ಎಚ್ಡಿಕೆ

ಬೆಂಗಳೂರು, ನವೆಂಬರ್ 14, 2021 (www.justkannada.in): ಬಿಜೆಪಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದು, ಆರೋಪಗಳ ಸುರಿಮಳೆಗೈದಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಮಲ ಪಕ್ಷದ ನಾಯಕರ ಕುಟುಂಬ ರಾಜಕಾರಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಟೀಕಿಸಿದ್ದಾರೆ.

ಈ ಕೆಳಗಿದೆ ಸರಣಿ ಟ್ವೀಟಾಸ್ತ್ರ!
ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ.
ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ.
1.ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.
4.ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.
4.ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.
5.ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು.ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.
6.ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?
7.ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.
ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ?
ಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ.
ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ.