Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದ್ರೆ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ? ರಾಜ್ಯ...

ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದ್ರೆ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ? ರಾಜ್ಯ ಬಿಜೆಪಿ ವ್ಯಂಗ್ಯ.

ಬೆಂಗಳೂರು,ನವೆಂಬರ್,17,2021(www.justkannada.in):  ನಿನ್ನೆ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಸಿದ್ಧರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಕಾರ್ಯಕರ್ತರು ಘೋಷಣೆ ಕೂಗಿ ಅಡ್ಡಿಪಡಿಸಿದ ವಿಚಾರವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಗೆ ರಾಜ್ಯ ಬಿಜೆಪಿ ಕುಟುಕಿದೆ.

ಘಟನೆ ಕುರಿತು ಸರಣಿ ಟ್ವಿಟ್ ಮಾಡಿ ವ್ಯಂಗ್ಯವಾಡಿರುವ ರಾಜ್ಯ ಬಿಜೆಪಿ ಘಟಕ,  ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷ ಪೂಜೆ ಮಾತ್ರ ಸಾಕು ಎಂದು ಡಿಕೆ ಶಿವಕುಮಾರ್ ಅವರು ಸಿದ್ಧರಾಮಯ್ಯ ಅವರನ್ನ ಗುರಿಯಾಗಿಸಿ ಸೂಚನೆ ನೀಡಿದ್ದಾರೆ. ಸಿದ್ಧರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೇ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಲೇವಡಿ ಮಾಡಿದೆ.

ಹಾಗೆಯೇ ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ಉಗ್ರಪ್ಪ ಅವರಿಗೆ ಬರೇ ನೋಟೀಸ್‌ ನೀಡಿದೆ. ಅಲ್ಪಸಂಖ್ಯಾತರೇ, ಕರ್ನಾಟಕ ಕಾಂಗ್ರೆಸ್ ಪಕ್ಷದ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ ಎಂದು ಕರ್ನಾಟಕ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

Key words: How can -Buruderamaiah – tolerated – activists – DK – state BJP