Tuesday, August 4, 2026

BDA Apartments

Home Crime ರಸ್ತೆ ಅಪಘಾತ : ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆ ಅಪಘಾತ : ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

ಮಂಡ್ಯ, ನ.19, 2021 : (www.justkannada.in news) ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ಆಟೋ ಮತ್ತು ಟಿಪ್ಪರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಳವಳ್ಳಿ ತಾಲೂಕಿನ ನೆನಲಮಾಕನಹಳ್ಳಿ ಬಳಿ ಟಿಪ್ಪರ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು,

ಆಟೋದಲ್ಲಿದ್ದ ಬಂಡೂರು ಗ್ರಾ.ಪಂ.ಅಧ್ಯಕ್ಷೆ ಮುತ್ತಮ್ಮ,(45) ಬಸಮ್ಮಣ್ಣಿ,(30) ದಡದಪುರದ ವೆಂಕಟೇಶ್(22) ಸೇರಿದಂತೆ ಇಬ್ಬರು ಮಕ್ಕಳು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

three-death-bike-collides-goods-vehicle-chamarajanagar

key words : mandya-road-accident-5-dead-police