Saturday, August 15, 2026

BDA Apartments

Home Front Page ಇನ್ನೂ 2-3 ದಿನ ನಿಲ್ಲಲ್ಲ ಮಳೆ ಆರ್ಭಟ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಕೆ

ಇನ್ನೂ 2-3 ದಿನ ನಿಲ್ಲಲ್ಲ ಮಳೆ ಆರ್ಭಟ: ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಕೆ

ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನವೆಂಬರ್ 23 ರವರೆಗೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ,ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು. ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ನವೆಂಬರ್ 22 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.