Friday, September 18, 2026

BDA Apartments

ಮೇಲ್ಮನೆ ಚುನಾವಣೆಯಲ್ಲಿ ಬೆಂಬಲಿಸಿದ್ರೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಿಹಿ...
Home Front Page ಮೇಲ್ಮನೆ ಚುನಾವಣೆಯಲ್ಲಿ ಬೆಂಬಲಿಸಿದ್ರೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಿಹಿ ಸುದ್ದಿ ಎಂದ ನಳಿನ್ ಕುಮಾರ್ ಕಟೀಲ್

ಮೇಲ್ಮನೆ ಚುನಾವಣೆಯಲ್ಲಿ ಬೆಂಬಲಿಸಿದ್ರೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಿಹಿ ಸುದ್ದಿ ಎಂದ ನಳಿನ್ ಕುಮಾರ್ ಕಟೀಲ್

ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ರಾಜ್ಯದ ಗ್ರಾಮಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್ ನೀಡುವ ಭರವಸೆ ನೀಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.

ಕಲಬುರಗಿಯಲ್ಲಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನವನ್ನು 10 ಸಾವಿರಕ್ಕೆ ಹೆಚ್ಚಿಸಲಾಗುವುದು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಬಾರಿ ಹೆಚ್ಚು ಸಂಖ್ಯೆಯ ಪರಿಷತ್ ಸದಸ್ಯರನ್ನು ಗೆಲ್ಲಿಸಿದರೆ, ಮುಂದೆ ಗ್ರಾಪಂ ವರಿಷ್ಠರು ಹಾಗೂ ಸದಸ್ಯರ ಗೌರವ ಧನ ಏರಿಸಲು ಪಕ್ಷದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೇರಳದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ 1 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಗ್ರಾಪಂ ಅಧ್ಯಕ್ಷರಿಗೆ ಕಾರು, ಆಪ್ತ ಸಹಾಯಕರನ್ನು ಒದಗಿಸಲಾಗುತ್ತದೆ. ಇಲ್ಲಿಯೂ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಹಣ ನೀಡಲು ಸಿಎಂ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.