Saturday, August 22, 2026

BDA Apartments

Home Front Page ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ದಾವಣಗೆರೆ,ನವೆಂಬರ್,24,2021(www.justkannada.in):  ಬಿಜೆಪಿ ಜೆಡಿಎಸ್ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪರಸ್ಪರ ಸಹಕಾರ ಕೊಡಿ ಎಂದು ಜೆಡಿಎಸ್ ಗೆ ಕೇಳುತ್ತೇವೆ.  ಜೆಡಿಎಸ್ ಜೊತೆ ಹೊಂದಾಣಿಕೆ ಬಗ್ಗೆ ಇಷ್ಟರಲ್ಲಿಯೇ ನಿರ್ಧಾರ ಮಾಡುತ್ತೇವೆ. ಈ ಬಗ್ಗೆ ಜೆಡಿಎಸ್ ಜೊತೆ ಚರ್ಚಿಸುವುದಾಗಿ ಬಿಎಸ್‌ವೈ ತಿಳಿಸಿದ್ದಾರೆ.

ಪರಸ್ಪರ ಸಹಕಾರ ಕೊಡಿ ಎಂದು ಅವರಲ್ಲಿ ಕೇಳುತ್ತೇವೆ. ವಿಧಾನ ಪರಿಷತ್ ಚುನಾವಣೆಯಿಂದ ಎರಡನೇ ಸುತ್ತಿನ ಪ್ರಚಾರ ಶುರುವಾಗಿದೆ. ರಾಜ್ಯದಲ್ಲಿ ಕೇವಲ 20 ಸೀಟ್​ ಗಳಿಗೆ ನಿಶ್ಚಿತವಾಗಿ ಸ್ಪರ್ಧೆ ಮಾಡುತ್ತೇವೆ. ಇದರಲ್ಲಿ 15 ಸೀಟ್ ಗೆದ್ದೇ ಗೆಲ್ಲುತ್ತೇವೆ. ವಿಧಾನ ಪರಿಷತ್​ನಲ್ಲಿ ಸ್ಪಷ್ಟ ಬಹುಮತ ಸಿಗಲಿ ಎಂದು ಅಪೇಕ್ಷೆ. ಬಿಜೆಪಿ ಪರ ವಾತಾವರಣ ಎಲ್ಲಾ ಕಡೆ ಇದೆ. ಅದ್ದರಿಂದ ಎಲ್ಲಾ ಕಡೆ ಪ್ರವಾಸ ಶುರು ಮಾಡಿದ್ದೇವೆ. ಶಾಸಕರು ಕೂಡ ನಮ್ಮವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು  ಬಿಎಸ್ ವೈ ತಿಳಿಸಿದರು.

Key words: Decision – BJP-JDS- compatibility- soon- Alliance-Former CM -BS Yeddyurappa.