Wednesday, July 29, 2026

BDA Apartments

Home Front Page ರಾಜ್ಯದಲ್ಲಿ ಕೊರೊನಾ ರೂಪಾಂತರಿ ಹೊಸ ವೈರಸ್: ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಕೊರೊನಾ ರೂಪಾಂತರಿ ಹೊಸ ವೈರಸ್: ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು, ನವೆಂಬರ್ 2021 (www.justkannada.in): ರಾಜ್ಯದಲ್ಲಿ ಕೊರೊನಾ ರೂಪಾಂತರಿ ಹೊಸ ವೈರಸ್ ಒಮಿಕ್ರಾನ್ ಪತ್ತೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ರೂಪಾಂತರಿ ಹೊಸ ವೈರಸ್ ಒಮಿಕ್ರಾನ್ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಿದ್ದ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಬಂದಿತ್ತು. ವಿದೇಶದಿಂದ ಬಂದವರನ್ನು ಏರ್ ಪೋರ್ಟ್ ನಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೋವಿಡ್ ಟೆಸ್ಟ್ ಮಾಡಿಸಿ ನೆಗೆಟೀವ್ ಬಂದರೆ ಮಾತ್ರ ವಿಮಾನ ನಿಲ್ದಾಣದಿಂದ ಹೊರ ಬಿಡಲಾಗುವುದು. ಇಲ್ಲದಿದ್ದರೆ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಮುಂದುವರೆಸಲಾಗುತ್ತದೆ ಎಂದಿದ್ದಾರೆ.