Sunday, September 20, 2026

BDA Apartments

Home Front Page ಒಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಇಳಿಮುಖ

ಒಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಇಳಿಮುಖ

ಬೆಂಗಳೂರು, ನವೆಂಬರ್ 30, 2021 (www.justkannada.in): ಕಳೆದ 24 ಗಂಟೆಯಲ್ಲಿ ಮತ್ತೆ 6,990 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಮಿಕ್ರಾನ್ ಭೀತಿ ನಡುವೆಯೇ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತವಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದ್ದು ಒಂದೇ ದಿನದಲ್ಲಿ 190 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ 100543 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10116 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34008183 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ ದೇಶದಲ್ಲಿ 10,12,523 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 78,80,545 ಜನರಿಗೆ ಲಸಿಕೆ ನೀಡಲಾಗಿದೆ.