Sunday, October 11, 2026

Dasara Wishes

ಇಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ DasraWishes_JK DasraWishes JK
Happy Dasara
Home Front Page ಏರ್’ಪೋರ್ಟ್ ಮಾತ್ರವಲ್ಲದೇ ಅಂತಾರಾಜ್ಯ ಪ್ರವಾಸಿಗರ ಮೇಲೆ ಹದ್ದಿನಕಣ್ಣು: ಸಚಿವ ಡಾ.ಕೆ.ಸುಧಾಕರ್

ಏರ್’ಪೋರ್ಟ್ ಮಾತ್ರವಲ್ಲದೇ ಅಂತಾರಾಜ್ಯ ಪ್ರವಾಸಿಗರ ಮೇಲೆ ಹದ್ದಿನಕಣ್ಣು: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ನವೆಂಬರ್ 30, 2021 (www.justkannada.in): ರಾಜ್ಯದಲ್ಲಿ ಕೋವಿಡ್ 2 ನೇ ಡೋಸ್ ಲಸಿಕೆ ಪೂರ್ಣ ಪ್ರಮಾಣದಲ್ಲಿ ಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖವಾಗಿ 2 ನೇ ಡೋಸ್ ಪೂರ್ಣ ಪ್ರಮಾಣದಲ್ಲಿ ಕೊಡುವ ನಿಟ್ಟಿನಲ್ಲಿ ನಿರ್ದಿಷ್ಟ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಮಂಗಳೂರು ಏರ್ ಪೋರ್ಟ್ ಮಾತ್ರವಲ್ಲದೇ ಅಂತರಾಜ್ಯ ಪ್ರವಾಸಿಗರು ಬರುತ್ತಿರುವ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

ಇಂದಿನ ಸಭೆಯಲ್ಲಿ ವಿದೇಶಗಳಿಂದ, ಅಂತರರಾಜ್ಯಗಳಿಂದ ಬರುವ ಪ್ರಯಾಣಿಕರ ಕೊವಿಡ್ ನೆಗೆಟಿವ್, ಪಾಸಿಟಿವ್ ಬಂದವರ ಕ್ವಾರಂಟೈನ್ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.