Wednesday, September 30, 2026

BDA Apartments

ಶೀಘ್ರವೇ ಸಂಪುಟ ವಿಸ್ತರಣೆ ಸುಳಿವು ನೀಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ BDA JK_Ad...
Home Front Page ಶೀಘ್ರವೇ ಸಂಪುಟ ವಿಸ್ತರಣೆ ಸುಳಿವು ನೀಡಿದ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ.

ಶೀಘ್ರವೇ ಸಂಪುಟ ವಿಸ್ತರಣೆ ಸುಳಿವು ನೀಡಿದ ಮಾಜಿ ಸಿಎಂ ಬಿಎಸ್  ಯಡಿಯೂರಪ್ಪ.

ಬೆಂಗಳೂರು,ಡಿಸೆಂಬರ್,4,2021(www.justkannada.in):  ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದ ನಂತರ ಮೊದಲ ಬಾರಿಗೆ ಸಂಪುಟ ಪುನಾರಚನೆ ವಿಷಯ ಮುನ್ನಲೆಗೆ ಬಂದಿದ್ದು, ಈ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡಿದ್ದಾರೆ.

ಹೌದು ಈ ಬಗ್ಗೆ ಸ್ವತಃ ಅವರೇ ಮಾತನಾಡಿದ್ದು, ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡುತ್ತಾರೆ. ಇಷ್ಟರಲ್ಲೇ  ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳುವ ಮೂಲಕ ಸುಳಿವು ನೀಡಿದ್ದಾರೆ.

ರಾಜ್ಯದ 20 ಸ್ಥಳೀಯ ಸಂಸ್ಥೆಗಳ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದ್ದು,  ಪರಿಷತ್ ಚುನಾವಣೆ ನಂತರ ಸಂಪುಟ ಪುನಾರಚನೆಗೆ ಬೊಮ್ಮಾಯಿ ಕೈ ಹಾಕಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಡಿಸೆಂಬರ್ 10ರ ಪರಿಷತ್ ಚುನಾವಣೆ ನಂತರ ಸಂಪುಟದಲ್ಲಿ ಬದಲಾವಣೆ ಸಾಧ್ಯತೆ ಇದೆ. ಅಧಿವೇಶನ ಮುಗಿಯುತ್ತಿದ್ದಂತೆ ಸಂಪುಟಕ್ಕೆ ಹೊಸ ಮುಖಗಳ ಪರಿಚಯವಾಗಲಿದೆ. ಹೊಸ ವರ್ಷಕ್ಕೆ ಬೊಮ್ಮಾಯಿ ಸಂಪುಟ ಪುನಾರಚನೆ ಬಹುತೇಕ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

Key words: Former CM- BS Yeddyurappa -hinted -soon – expand -cabinet