Friday, August 21, 2026

BDA Apartments

Home Front Page ಬೆಂಗಳೂರಿನಲ್ಲಿ ಮತ್ತೆ ಮಳೆರಾಯನ ಅಬ್ಬರ: ವಾಹನ ಸವಾರರ ಪರದಾಟ.

ಬೆಂಗಳೂರಿನಲ್ಲಿ ಮತ್ತೆ ಮಳೆರಾಯನ ಅಬ್ಬರ: ವಾಹನ ಸವಾರರ ಪರದಾಟ.

ಬೆಂಗಳೂರು,ಡಿಸೆಂಬರ್,13,2021(www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗಿದ್ದು, ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಾಯುಭಾರ ಕುಸಿತದ ಪರಿಣಾಮದಿಂದಾಗಿ ಬೆಂಗಳೂರಿನಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿ, ವಾಹನ ಸವಾರರು  ಹೈರಾಣಾಗಿದ್ದಾರೆ. ನಗರದ ವಿಲ್ಸನ್ ಗಾರ್ಡನ್, ಮಲ್ಲೇಶ್ವರಂ, ಯಶವಂತಪುರ, ಹೊಸಕೋಟೆ, ಕೆ ಆರ್ ಪುರಂ, ಜಯನಗರ, ಮೆಜೆಸ್ಟಿಕ್ ಸೇರಿದಂತೆ  ಹಲವು ಕಡೆಗಳಲ್ಲಿ ಮಳೆಯಾಗಿದೆ.Department - Meteorology – rain- state

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Key words: Rain-again – Bangalore-traffice