Thursday, September 17, 2026

BDA Apartments

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾನಿಗೊಳಿಸಿದ್ಧನ್ನ ಖಂಡಿಸಿ ಮೈಸ...
Home Front Page ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾನಿಗೊಳಿಸಿದ್ಧನ್ನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಹಾನಿಗೊಳಿಸಿದ್ಧನ್ನ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ.

ಮೈಸೂರು,ಡಿಸೆಂಬರ್,18,2021(www.justkannada.in):  ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ಪುಂಡಾಟ ಮೆರೆದ ಎಂಇಎಸ್ ಪುಂಡರ ವಿರುದ್ಧ ಮೈಸೂರಿನಲ್ಲಿ ಕರ್ನಾಟಕ ಪ್ರದೇಶ ಕುರುಬ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ನ್ಯಾಯಾಲಯದ ಗಾಂಧಿ ಪ್ರತಿಮೆ ಮುಂಭಾಗ ಜಮಾಯಿಸಿದ ಕರ್ನಾಟಕ ಪ್ರದೇಶ ಕುರುಬ ಸಂಘದ ಸದಸ್ಯರು, ಘಟನೆಯನ್ನ ಖಂಡಿಸಿ ಕನ್ನಡ ವಿರೋದಿಗಳನ್ನ ಕೂಡಲೇ ಗಡಿ ಪಾರು ಮಾಡಬೇಕೆಂದು ಅಗ್ರಹಿಸಿದರು.

ದೇಶಪ್ರೇಮಿ ಸೇನಾನಿಗೆ ಅವಮಾನ ಮಾಡಿದ ಕಿಡಿಗೇಡಿಗಳ ಮೇಲೆ ಪ್ರಕರಣ ದಾಖಲಿಸಿ ಬಂಧಿಸುವಂತೆ‌ ಒತ್ತಾಯಿಸಿದ ಪ್ರತಿಭಟನಾಕಾರರು, ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Key words: Protest- Mysore -condemning – destruction – statue-sangolli Rayanna