Wednesday, August 5, 2026

BDA Apartments

Home Front Page 28ರಿಂದ ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಆದೇಶ

28ರಿಂದ ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಆದೇಶ

ಬೆಂಗಳೂರು, ಡಿಸೆಂಬರ್ 26, 2021 (www.justkannada.in):  ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ಭಾನುವಾರ ಸರಕಾರ ಆದೇಶ ಹೊರಡಿಸಿದೆ.

ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಈ ಸಂಬಂಧ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಕೋವಿಡ್ ಮತ್ತು ಒಮಿ ಕ್ರಾನ್ ಆತಂಕದ ಹಿನ್ನಲೆ ಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.