Wednesday, August 12, 2026

BDA Apartments

Home Front Page ಬಂದ್ ವಾಪಸ್ ಪಡೆಯುವಂತೆ ವಾಟಾಳ್ ನಾಗರಾಜ್ ಗೆ ಸಿಎಂ ಬೊಮ್ಮಾಯಿ ಮನವಿ.

ಬಂದ್ ವಾಪಸ್ ಪಡೆಯುವಂತೆ ವಾಟಾಳ್ ನಾಗರಾಜ್ ಗೆ ಸಿಎಂ ಬೊಮ್ಮಾಯಿ ಮನವಿ.

ಬೆಂಗಳೂರು,ಡಿಸೆಂಬರ್,30,2021(www.justkannada.in):  ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31ಕ್ಕೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೇ ಕೆಲವು ಸಂಘಟನೆಗಳು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ವ್ಯಕ್ತಪಡಿಸಿವೆ.

ಈ ಮಧ್ಯೆ ಬಂದ್ ಕೈಬಿಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.  ಈ ಕುರಿತು ಮಾತನಾಡಿರುವ ಸಿಎಂ ಬೊಮ್ಮಾಯಿ, ಪ್ರವೀಣ್ ಶೆಟ್ಟಿ ಬಂದ್ ಗೆ ಕರೆ ಕೊಡಲ್ಲ ಎಂದಿದ್ದಾರೆ.ವಾಟಾಳ್ ನಾಗರಾಜ್ ಬಗ್ಗೆ ಅಪಾರ ಗೌರವವಿದೆ ಯಾವುದೇ ಕಾರಣಕ್ಕೂ ಜನರಿಗೆ ಸಂಕಷ್ಟವಾಗುವುದು ಬೇಡ ನಾಳಿನ ಬಂದ್ ವಾಪಸ್ ಪಡೆಯಲು ಮನವಿ ಮಾಡುತ್ತೇನೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿ ಸರ್ಕಾರಿ ವಾಹನಗಳ ಮೇಲೆ ಎಂಇಎಸ್ ಪುಂಡರು ಕಲ್ಲು ತೂರಿದ್ದರು. ಅಲ್ಲದೆ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು.

Key words: CM- Bommai -appeals – Vatal Nagaraj –bandh- back