Sunday, August 23, 2026

BDA Apartments

Home Front Page ಮೇಕೆದಾಟು ಪಾದಯಾತ್ರೆ: ಜ.3 ರಂದು ಮೈಸೂರಿನಲ್ಲಿ ಪೂರ್ವಭಾವಿ ಸಭೆ- ಶಾಸಕ ಯತೀಂದ್ರ ಸಿದ್ಧರಾಮಯ್ಯ ಮಾಹಿತಿ.

ಮೇಕೆದಾಟು ಪಾದಯಾತ್ರೆ: ಜ.3 ರಂದು ಮೈಸೂರಿನಲ್ಲಿ ಪೂರ್ವಭಾವಿ ಸಭೆ- ಶಾಸಕ ಯತೀಂದ್ರ ಸಿದ್ಧರಾಮಯ್ಯ ಮಾಹಿತಿ.

ಮೈಸೂರು,ಡಿಸೆಂಬರ್,30,2021(www.justkannada.in): ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ನಡುವೆ ಜನವರಿ 3 ರಂದು ಮೈಸೂರಿನಲ್ಲಿ ಈ ಸಂಬಂಧ ಪೂರ್ವಭಾವಿ ಸಭೆ ನಡೆಯಲಿದೆ.

ಪೂರ್ವಭಾವಿ ಸಭೆ ಬಗ್ಗೆ ಸ್ಥಳೀಯ ನಾಯಕರೊಂದಿಗೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಚರ್ಚೆ ನಡೆಸಿದರು.  ವರುಣ ಕ್ಷೇತ್ರ, ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಹಿರಿಯ ಮುಖಂಡರು, ಚುನಾಯಿತ ಪ್ರತಿನಿಧಿಗಳ ಜೊತೆ ಯತೀಂದ್ರ ಸಿದ್ಧರಾಮಯ್ಯ ಚರ್ಚಿಸಿದರು.

ಮೈಸೂರಿನ ಗನ್ ಹೌಸ್ ಬಳಿ ಇರುವ ಬಸವೇಶ್ವರ ಸರ್ಕಲ್ ನಿಂದ ಮೆರವಣಿಗೆ ಮೂಲಕ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳು ಮೂಲಕ ಈ ಸಭೆಯನ್ನು ಯಶಸ್ವಿಗೊಳಿಸಲು ಯತೀಂದ್ರ ಸಿದ್ಧರಾಮಯ್ಯ ಕರೆ ನೀಡಿದರು.

ಪೂರ್ವಭಾವಿ ಸಭೆ ಕುರಿತು ಮಾತನಾಡಿ ಮಾಹಿತಿ ನೀಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಮೇಕೆದಾಟು ಪಾದಯಾತ್ರೆ ಸಂಬಂಧ ಜ.3ರಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಸಭೆಗೆ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು.

Key words: mekedatu plan-Preliminary meeting – Mysore -Jan. 3-MLA -Yatindra Siddaramaiah.