Friday, August 14, 2026

BDA Apartments

Home Front Page ಜನರ ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಿ- ಸಚಿವ ಎಸ್.ಟಿ ಸೋಮಶೇಖರ್.

ಜನರ ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಿ- ಸಚಿವ ಎಸ್.ಟಿ ಸೋಮಶೇಖರ್.

ಮೈಸೂರು,ಜನವರಿ 3,2022(www.justkannada.in): ಜನರ ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಿ  ಎಂದು ಕಾಂಗ್ರೆಸ್ ನಾಯಕರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಜನರ ಆರೋಗ್ಯದ ದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಿ. ಕೊರೊನಾ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಬೇರೆ ರಾಜ್ಯಗಳಲ್ಲಿ ವಿದೇಶದಲ್ಲೂ ಪ್ರಕರಣ ಹೆಚ್ಚಾಗಿದೆ. ಎರಡನೇ ಅಲೆಯಲ್ಲಿ ಸಾಕಷ್ಟು ಅನಾಹುತ ಆಗಿದೆ. ಅದು ಮೂರನೇ ಅಲೆಯಲ್ಲಿ ಆಗಬಾರದು. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಜನರ ಹಿತದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಬೇಕು ಎಂದರು.

ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ಗೆ ಮಾಡಲು ಏನು ಕೆಲಸ ಇಲ್ಲ. ಪಾದಯಾತ್ರೆ ಒಂದು ಚುನಾವಣಾ ಗಿಮಿಕ್. ಇಷ್ಟು ವರ್ಷ ಅವರು ಏನು ಮಾಡಲಿಲ್ಲ. ಸಮ್ಮಿಶ್ರ ಸರ್ಕಾರ ಇದ್ದಾಗಲೂ ಯೋಜನೆ ಬಗ್ಗೆ ಮಾತನಾಡಲಿಲ್ಲ. ಈಗ ರಾಜಕೀಯ ಕಾರಣಕ್ಕೆ ಪಾದಯಾತ್ರೆ ಗಿಮಿಕ್ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತದೆ ಎಂದು ಸೋಮಶೇಖರ್ ಕಿಡಿಕಾರಿದರು.

ಕೇಂದ್ರ ಹಾಗೂ ತಜ್ಞರ ಸಲಹೆ ಮೇರೆಗೆ  ಲಾಕ್ ಡೌನ್ ಬಗ್ಗೆ ನಿರ್ಧಾರ  ನಿರ್ಧಾರ

ರಾಜ್ಯದಲ್ಲಿ ಲಾಕ್‌ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಸ್.ಟಿ ಸೋಮಶೇಖರ್, ಕೇಂದ್ರ ಹಾಗೂ ತಜ್ಞರ ಸಲಹೆ ಮೇರೆಗೆ  ನಿರ್ಧಾರ ಕೈಕೊಳ್ಳಲಾಗುತ್ತದೆ. ಅವರು ಕಠಿಣ ಕ್ರಮ ಸೇರಿ ಏನೇ ಸಲಹೆ ಕೊಟ್ಟರು ಪಾಲಿಸುತ್ತೇವೆ. ಸದ್ಯಕ್ಕೆ ಬೇರೆ ರಾಜ್ಯದಷ್ಟು ನಮ್ಮಲ್ಲಿ ಸಮಸ್ಯೆಯಾಗಿಲ್ಲ. ಜನರು ಸಹಕಾರ ನೀಡುತ್ತಿದ್ದಾರೆ. ಎರಡು ದಿನಕ್ಕೊಮ್ಮೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ತಜ್ಞರ ಜೊತೆ ಸಭೆ ನಡೆಯುತ್ತಿದೆ. ಎರಡನೇ ಅಲೆಯಿಂದ ಆದ ಅನಾಹುತದಿಂದ ಎಲ್ಲರೂ ಎಚ್ಚೆತ್ತುಕೊಂಡಿದ್ದಾರೆ ಎಂದರು.

Key words: people- health –leave-padayatra- Minister -ST Somashekhar