Sunday, August 2, 2026

BDA Apartments

Home Cinema ‘ಏಕ್ ಲವ್ ಯಾ’ ಚಿತ್ರದ ರಿಲೀಸ್ ದಿನಾಂಕ ಮುಂದೂಡಿದ ಪ್ರೇಮ್

‘ಏಕ್ ಲವ್ ಯಾ’ ಚಿತ್ರದ ರಿಲೀಸ್ ದಿನಾಂಕ ಮುಂದೂಡಿದ ಪ್ರೇಮ್

ಬೆಂಗಳೂರು, ಜನವರಿ 06, 2022 (www.justkannada.in): ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡಲು ನಿರ್ಧರಿಸಲಾಗಿದೆ.

ಹೌದು. ರಾಣಾ ನಾಯಕರಾಗಿ ಪದಾರ್ಪಣೆ ಮಾಡುತ್ತಿರುವ ಏಕ್ ಲವ್ ಯಾ ಸಿನಿಮಾವನ್ನು ಜನವರಿ 21 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಆ ನಿರ್ಧಾರದಿಂದ ಚಿತ್ರತಂಡ ಹಿಂದೆ ಸರಿದಿದೆ.

ರಾಜ್ಯ ಸರ್ಕಾರ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಿದ ಬೆನ್ನಲ್ಲೇ ಏಕ್ ಲವ್ ಯಾ ಬಿಡುಗಡೆ ಮುಂದೂಡಿಕೆ ಮಾಡುತ್ತಿರುವುದಾಗಿ ಪ್ರೇಮ್ ಮಾಹಿತಿ ಹಂಚಿಕೊಂಡಿದ್ದಾರೆ. ಶೀಘ್ರವೇ ಹೊಸ ದಿನಾಂಕವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಥಿಯೇಟರ್ ನಲ್ಲಿ ಈಗ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶವಿದೆ. ಕೊರೋನಾ ಪರಿ‍ಸ್ಥಿತಿ ಸುಧಾರಿಸಿದ ಮೇಲೆ ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರೇಮ್ ತಿಳಿಸಿದ್ದಾರೆ.