Saturday, August 22, 2026

BDA Apartments

Home Cinema ಸೂಪರ್ ಸ್ಟಾರ್ ಮಹೇಶ್ ಬಾಬು ಕೊರೊನಾ ಸೋಂಕು

ಸೂಪರ್ ಸ್ಟಾರ್ ಮಹೇಶ್ ಬಾಬು ಕೊರೊನಾ ಸೋಂಕು

ಬೆಂಗಳೂರು, ಜನವರಿ 07, 2022 (www.justkannada.in): ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಟ್ವೀಟ್ಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಮಹೇಶ್ ಬಾಬು,  ‘ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಣ್ಣಪುಟ್ಟ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

ಹೋಮ್ ಐಸೋಲೇಶನ್‌ನಲ್ಲಿದ್ದು, ಕೆಲವು ದಿನಗಳಿಂದ ನನ್ನೊಂದಿಗೆ ನಿಕಟ ಸಂಪರ್ಕದಲ್ಲಿರುವ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗಿ ಮತ್ತು ಜಾಗರೂಕರಾಗಿರಿ. ಇನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ಮಹೇಶ್ ಬಾಬು ‘ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಪರೀಕ್ಷೆ ಮಾಡಿಸಿದೆ. ಈ ವೇಳೆ ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಣ್ಣಪುಟ್ಟ ರೋಗಲಕ್ಷಣಗಳು ಕಾಣಿಸಿಕೊಂಡಿವೆ ಎಂದು ತಿಳಿಸಿದ್ದಾರೆ.