Thursday, October 15, 2026

Dasara Wishes

ಮತ್ತೊಂದು ಬಹುಕೋಟಿ ವಂಚನೆ ಬಯಲು: ಗ್ರಾಹಕರಿಂದ ಹಣ ಸಂಗ್ರಹಿಸಿ ವಂಚಕರು ಪರಾರಿ...
Happy Dasara
Home Cinema ನಟಿ ನಿಶ್ವಿಕಾ ನಾಯ್ಡುಗೆ ಕೊರೋನಾ ಪಾಸಿಟಿವ್

ನಟಿ ನಿಶ್ವಿಕಾ ನಾಯ್ಡುಗೆ ಕೊರೋನಾ ಪಾಸಿಟಿವ್

ಬೆಂಗಳೂರು, ಜನವರಿ 09, 2021 (www.justkannada.in): ಸ್ಯಾಂಡಲ್ ವುಡ್ ನಟಿ ನಿಶ್ವಿಕಾ ನಾಯ್ಡುಗೆ ಕೊರೋನಾ ಪಾಸಿಟಿವ್ ಆಗಿದೆ.

ಹೌದು. ಕೊರೋನಾ ಮೂರನೇ ಅಲೆ ಬಾಲಿವುಡ್, ಟಾಲಿವುಡ್ ನಟರನ್ನು ಕಾಡಿದ್ದು, ಇದೀಗ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿದೆ.

ಡಾರ್ಲಿಂಗ್ ಕೃಷ್ಣ ಜೊತೆಗೆ ದಿಲ್ ಪಸಂದ್ ಸಿನಿಮಾದಲ್ಲಿ ನಟಿಸುತ್ತಿರುವ ನಿಶ್ವಿಕಾ, ಗುರು ಶಿಷ್ಯರು, ಯೋಗರಾಜ್ ಭಟ್ಟರ ಗಾಳಿಪಟ 2 ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ.

ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಕೊರೊನಾ ದೃಢಪಟ್ಟಿರುವ ವಿಷಯವನ್ನುದೃಢಪಡಿಸಿದ್ದಾರೆ.

ಸದ್ಯಕ್ಕೆ ಹೋಂ ಐಸೋಲೇಷನ್ ಗೊಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ನಿಶ್ವಿಕಾ ತಿಳಿಸಿದ್ದಾರೆ. ಜತೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ.