Thursday, October 15, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಮೇಕೆದಾಟು: ಕಾಂಗ್ರೆಸ್​​ ಪಾದಯಾತ್ರೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

ಮೇಕೆದಾಟು: ಕಾಂಗ್ರೆಸ್​​ ಪಾದಯಾತ್ರೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

ಬೆಂಗಳೂರು, ಜನವರಿ 09, 2021 (www.justkannada.in): ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​​ ಹಮ್ಮಿಕೊಂಡಿರುವ ಪಾದಯಾತ್ರೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಿಂದ ಆರಂಭವಾಗಿರುವ ಪಾದಯಾತ್ರೆ 10 ದಿನಗಳವರೆಗೆ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಪಕ್ಷದ ಶಾಸಕರು, ಸಂಸದರು, ಎಂಎಲ್ಸಿಗಳು, ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

ಪಾದಯಾತ್ರೆಗೆ ಚಿತ್ರನಟರೂ ಸಾಥ್ ನೀಡಿದ್ದು, ನಟ ದುನಿಯಾ ವಿಜಯ್​, ಸಾಧುಕೋಕಿಲ, ಹಂಸಲೇಖ, ಜಯಮಾಲಾ, ಉಮಾಶ್ರೀ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ಮೊದಲ ದಿನ 15 ಕಿ.ಮೀ ಪಾದಯಾತ್ರೆ ನಡೆಯಲಿದೆ. ಸಂಗಮದಿಂದ ದೊಡ್ಡ ಆಲಹಳ್ಳಿಯವರೆಗೂ ನಡೆಯಲಿದೆ.