Tuesday, September 22, 2026

BDA Apartments

ಸಿಎಂ ಬೊಮ್ಮಾಯಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ BDA JK_Adv BDA Adv
Home Front Page ಸಿಎಂ ಬೊಮ್ಮಾಯಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ.

ಸಿಎಂ ಬೊಮ್ಮಾಯಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ.

ಬೆಂಗಳೂರು,ಜನವರಿ,11,2022(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಸದ್ಯ ಹೋಂ ಐಸೋಲೇಷನ್ ನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಸಂಜೆ 4:30ಕ್ಕೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಿಎಂ ಬೊಮ್ಮಾಯಿಗೆ ಕರೆ ಮಾಡಿದ್ದು  ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ್ದಾರೆ. ಸುಮಾರು ಐದು ನಿಮಿಷಗಳ ಕಾಲ  ಮಾತುಕತೆ ನಡೆದಿದ್ದು, ತಮಗೆ ಕೋವಿಡ್ ತಗಲಿರುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದ್ದಾರೆ. ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದರು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿವರ ನೀಡಿದರು.

Key words: PM Modi- calls – CM -Bommai -health