Sunday, August 9, 2026

BDA Apartments

Home Front Page ದೇಶದಲ್ಲಿ ಒಂದೇ ದಿನ  1.94 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ.

ದೇಶದಲ್ಲಿ ಒಂದೇ ದಿನ  1.94 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆ.

ನವದೆಹಲಿ,ಜನವರಿ,12,2022(www.justkannada.in):  ದೇಶದಲ್ಲಿ ಕೊರೋನಾ ಆಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,94,720 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,60,70,510ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ನಿಂದ 442 ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,84,655ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಹಾಗೆಯೇ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,55,319ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 60,405 ಮಂದಿ ಗುಣಮುಖರಾಗಿದ್ದು, ಈ ಮೂಲಕ ಈವರೆಗೆ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 3,46,30,536ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,61,900 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,52,74,380 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Key words: 1.94 lakh- Covid cases -detected – single day