Friday, September 18, 2026

BDA Apartments

ಮೇಕೆದಾಟು ಪಾದಯಾತ್ರೆ; ಕೆಪಿಸಿಸಿ ಮತ್ತು ಸರ್ಕಾರಕ್ಕೆ ಹೈಕೋರ್ಟ್ ತರಾಟೆ BDA JK_Adv...
Home Front Page ಮೇಕೆದಾಟು ಪಾದಯಾತ್ರೆ; ಕೆಪಿಸಿಸಿ ಮತ್ತು ಸರ್ಕಾರಕ್ಕೆ ಹೈಕೋರ್ಟ್ ತರಾಟೆ.

ಮೇಕೆದಾಟು ಪಾದಯಾತ್ರೆ; ಕೆಪಿಸಿಸಿ ಮತ್ತು ಸರ್ಕಾರಕ್ಕೆ ಹೈಕೋರ್ಟ್ ತರಾಟೆ.

ಬೆಂಗಳೂರು,ಜನವರಿ,12,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ.

ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಪಿಐಎಲ್ ವಿಚಾರಣೆ ನಡೆಸಿ ಹೈಕೋರ್ಟ್ ವಿಭಾಗೀಯ ಪೀಠ, ಕೋವಿಡ್ ಹೆಚ್ಚಳದ ವೇಳೆ ಪಾದಯಾತ್ರೆ ನಡೆಸುತ್ತಿದ್ದೀರಾ? ಪಾದಯಾತ್ರೆಗೂ ಮುನ್ನ ನೀವು ಅನುಮತಿ ಪಡೆದಿದ್ದೀರಾ? ಎಂದು ಹೈಕೋರ್ಟ್ ವಿಭಾಗೀಯ ಪೀಠ ಕೆಪಿಸಿಸಿಗೆ ಪ್ರಶ್ನಿಸಿದೆ.

ಇದೇ ವೇಳೆ ಸರ್ಕಾರದ ವಿರುದ್ಧ ಗರಂ ಆದ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರ ಪಾದಯಾತ್ರೆ ತಡೆಯಲು ಅಸಮರ್ಥವಾಗಿದೆಯೇ? ಅನುಮತಿ ಕೊಟ್ಟಿಲ್ಲದಿದ್ದರೂ ಯಾರಿಗಾಗಿ ಕಾಯುತ್ತಿದ್ದೀರಿ? ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ. ಸಾರ್ವಜನಿಕರ ಹಿತಾಸಕ್ತಿ ವಿರುದ್ಧ ಅನುಮತಿ ಇಲ್ಲದಿದ್ದರೂ ರ್ಯಾಲಿ ಮಾಡುತ್ತೀರುವ ಕಾಂಗ್ರೆಸ್ ವಿರುದ್ಧ ಸರ್ಕಾರ ಏಕೆ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

 ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್ ಅರ್ಜಿ ಸಲ್ಲಿಕೆಯಾಗಿದ್ದು, ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮೇಕೆದಾಟು ಪಾದಯಾತ್ರೆ ವಿರುದ್ಧ ಈಗಾಗಲೇ ಮೂರು ಎಫ್ ಐಆರ್ ದಾಖಲಾಗಿದೆ ಎಂದು ಎಎಜಿ ಮಾಹಿತಿ ನೀಡಿದ್ದಾರೆ. ಉತ್ತರಿಸಲು ನಾಳೆಯವರೆಗೆ ಕಾಲಾವಾಕಾಶ ನೀಡಿ, ಅರ್ಜಿ ವಿಚಾರಣೆಯನ್ನು ಜನವರಿ 14 ಕ್ಕೆ ಮುಂದೂಡಿದೆ.

Key words:  High Court – KPCC – Government-mekedatu padayatra