Tuesday, September 22, 2026

BDA Apartments

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವ...
Home Front Page ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವ್ಯಂಗ್ಯ.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವ್ಯಂಗ್ಯ.

ಮೈಸೂರು,ಜನವರಿ,14,2022(www.justkannada.in):  ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ಧ ಪಾದಯಾತ್ರೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ವ್ಯಂಗ್ಯವಾಡಿದ್ಧಾರೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮ  ತಾಲ್ಲೂಕು ಕಚೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕಾವೇರಿ ಜಲ ವಿವಾದ ಕೋರ್ಟ್ ನಲ್ಲಿದೆ. ಕಾಂಗ್ರೆಸ್ ಹೋರಾಟ ಮಾಡದಿದ್ದರೆ ಕೋರ್ಟ್ ತೀರ್ಪು ನೀಡೊದಿಲ್ವಾ.? ಅಂತರಾಜ್ಯ ಜಲವಿವಾದದ ಬಗ್ಗೆ ಹೊರಗಡೆ ಹೋರಾಟ ಮಾಡಿ ಗೆಲ್ಲೋಕಾಗಲ್ಲ. ಈ ಬಗ್ಗೆ ನಾನು ಹೆಚ್ಚು ವಿಶ್ಲೇಷಣೆ ಮಾಡಿ ಪ್ರತಿಕ್ರಿಯೆ‌ ನೀಡಲ್ಲ ಎಂದರು.

ಕಾಂಗ್ರೆಸ್ ನಾಯಕರು ಮೇಕೆದಾಟು ವಿಚಾರದಲ್ಲಿ ಎಷ್ಟೇ ನಗಾರಿ ಬಾರಿಸಿದರೂ ಕೋರ್ಟ್  ತೀರ್ಪು ಕೊಡಿಸಲು ಸಾಧ್ಯವಿಲ್ಲ ಎಂದು ಹೆಚ್.ಡಿ ದೇವೇಗೌಡರು ವ್ಯಂಗ್ಯವಾಡಿದರು.

Key words: Former Prime Minister -HD Deve Gowda- irony – Congress -padayatra