Sunday, September 13, 2026

BDA Apartments

Home Front Page ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು ಜನವರಿ 15,2022(www.justkannada.in): ಇಂದು ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ   ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದ ಅವರು, ಕೋವಿಡ್ ಮಹಾಮಾರಿ ಹಾವಳಿ ಇರುವುದರಿಂದ ನಾಗರಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

Key words: Governor- Thavar Chand Gehlot –worshiped-sankranthi