Sunday, August 23, 2026

BDA Apartments

Home Front Page ಕುತೂಹಲ ಮೂಡಿಸಿದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು- ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಕುತೂಹಲ ಮೂಡಿಸಿದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು- ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಜನವರಿ 28, 2021 (www.justkannada.in): ಮೇಲುಕೋಟೆ ಜೆಡಿಎಸ್ಶಾಸಕ ಸಿ.ಎಸ್‌. ಪುಟ್ಟರಾಜು ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಗುರುವಾರ ರಾತ್ರಿ ಸಿ.ಎಸ್‌. ಪುಟ್ಟರಾಜು ಅವರು ಮಾಜಿ ಸಿಎಂ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಸಂಜೆ 7.30 ಸುಮಾರಿಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಟ್ಟರಾಜು ಬಂದಿದ್ದರು. ಇಬ್ಬರೂ ಸುಮಾರು 1 ಗಂಟೆ ರಾಜ್ಯ ರಾಜಕೀಯ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ಮೇಲುಕೋಟೆ ಜೆಡಿಎಸ್ಶಾಸಕ ಸಿ.ಎಸ್‌. ಪುಟ್ಟರಾಜುವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ಜೆಡಿಎಸ್ ಪಕ್ಷದಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.