Sunday, October 11, 2026

Dasara Wishes

BJP DasraWishes_JK DasraWishes JK
Happy Dasara
Home Front Page ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವ ಸಾಧ್ಯತೆ.

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವ ಸಾಧ್ಯತೆ.

ಬೆಂಗಳೂರು,ಫೆಬ್ರವರಿ,2,2022(www.justkannada.in): ಸಚಿವ ಸಂಪುಟ ವಿಸ್ತರಣೆಗೆ ಶಾಸಕರಿಂದ ಒತ್ತಡಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವರಿಷ್ಠರ ಜೊತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ.

ಎರಡು ದಿನಗಳ ಕಾಲ ದೆಹಲಿಯಲ್ಲೆ ವಾಸ್ತವ್ಯ ಹೂಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ರಾಷ್ಟ್ರೀಯ ನಾಯಕರನ್ನ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ/ವಿಸ್ತರಣೆ, ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ, ಕಳೆದ ಆರು ತಿಂಗಳ ಅವಧಿಯಲ್ಲಿ ಸರ್ಕಾರದ ಸಾಧನೆ, ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು  ಹೇಳಲಾಗುತ್ತಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡಲ್ಲ. ನಾಳೆ ಬೆಳಿಗ್ಗೆ ಬಹುತೇಕ ದೆಹಲಿಗೆ ಹೋಗುವ ಸಾಧ್ಯತೆ ಇದೆ.    ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟರೇ ಹೋಗಿ ಚರ್ಚಿಸುವೆ ಎಂದಿದ್ದಾರೆ.

ಇನ್ನು ಫೆಬ್ರವರಿ 7 ರಿಂದ ಎಲ್ಲಾ ಇಲಾಖೆಗಳ ಜತೆ ಬಜೆಟ್ ಪೂರ್ವಭಾವಿ ಸಭೆ ನಡೆಸುತ್ತೇನೆ. ಬಜೆಟ್ ಗೂ ಮುನ್ನ ಸಂಸದರ ಜತೆ ಸಭೆ ನಡೆಸುತ್ತೇನೆ.  ಜಲ ವಿವಾದ ಸಂಬಂಧ ವಕೀಲರ ಜತೆ ಚರ್ಚಿಸುತ್ತೇನೆ  ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: CM-Basavaraja Bommai – Delhi -tomorrow.