Tuesday, August 11, 2026

BDA Apartments

Home Front Page ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಎತ್ತಂಗಡಿ….

ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಎತ್ತಂಗಡಿ….

ಬೆಂಗಳೂರು,ಆ,2,2019(www.justkannada.in):  ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕೇವಲ ಒಂದುವರೆ ತಿಂಗಳ ಹಿಂದೆಯಷ್ಟೇ ಅಧಿಕಾರ ಸ್ವೀಕರಿಸಿದ್ದ ದಕ್ಷ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನ ರಾಜ್ಯ ಬಿಜೆಪಿ ಸರ್ಕಾರ ಎತ್ತಂಗಡಿ ಮಾಡಿದೆ.

ಅಲೋಕ್ ಕುಮಾರ್ ಅವರನ್ನ ಕೆಎಸ್ ಆರ್ ಪಿ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ನೇಮಕ ಮಾಡಲಾಗಿದೆ.

ಈ ಹಿಂದೆ ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಲೋಕ್ ಕುಮಾರ್ ಅವರನ್ನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಜೂನ್ 17 ರಂದು ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು.

Key words: Bangalore City -Police Commissioner -Alok Kumar- transferred