Monday, September 28, 2026

BDA Apartments

ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿ ಸಮಾಜ ಒಡೆಯಲು ...
Home Front Page ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿ ಸಮಾಜ ಒಡೆಯಲು ಮುಂದಾಗಿದ್ದಾರೆ- ಮಾಜಿ ಸಿಎಂ...

ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿ ಸಮಾಜ ಒಡೆಯಲು ಮುಂದಾಗಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು,ಫೆಬ್ರವರಿ,10,2022(www.justkannada.in):  ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸಲ್ಲಿ ದ್ವೇಷ ತುಂಬಿ, ಸಮಾಜ ಒಡೆಯಲು ಹೊರಟಿದ್ದಾರೆ. ಸಂಘ ಪರಿವಾರದವರು ಇಡೀ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ‍್ಧರಾಮಯ್ಯ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ‍್ಧರಾಮಯ್ಯ, ಹಿಜಾಬ್ ನಿಂದ ಯಾರಿಗಾದರೂ ತೊಂದರೆಯಾಗಿದೆಯಾ..? 6 ವಿದ್ಯಾರ್ಥಿನೀಯರು ಹಿಜಾಬ್ ಹಾಕಿ ಬಂದರೇ ಅವರನ್ನ ಪ್ರಾಂಶುಪಾಲರು ತಡೆದಿದ್ದಾರೆ.  ಇವರಿಗೆ ಸಂವಿಧಧಾನದ ಮೇಲೆ ನಂಬಿಕೆ ಇದ್ದಿದ್ದರೇ ಪ್ರಿನ್ಸಿಪಾಲರನ್ನ ಸಸ್ಪೆಂಡ್ ಮಾಡಬೇಕಿತ್ತು. ಆದರೆ ಮಕ್ಕಳಲ್ಲಿ ಜಾತಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಕಿಡಿಕಾರಿದರು.

ಹಿಜಾಬ್ ಇಂದು ಅಥವಾ ನಿನ್ನೆ ಧರಿಸಲು ಆರಂಭ ಮಾಡಿದ್ದಲ್ಲ, ಖುರಾನ್ ನಲ್ಲೂ ಈ ಬಗ್ಗೆ ಉಲ್ಲೇಖವಿದೆ. ಈ ಹಿಜಾಬ್ ಅನ್ನು ಹೆಣ್ಣು ಮಕ್ಕಳು ಧರಿಸಿದರೆ ಬೇರೆಯವರಿಗೆ ಏನು ತೊಂದರೆ? ಒಬ್ಬ ಸರ್ಕಾರಿ ಕಾಲೇಜು ಪ್ರಿನ್ಸಿಪಾಲ್ ಹಿಜಾಬ್ ಧರಿಸಿದ ಹೆಣ್ಣು ಮಕ್ಕಳನ್ನು ಒಳಗೆ ಬಿಡದೆ ಕಾಲೇಜು ಗೇಟ್ ಹಾಕ್ತಾರೆ ಎಂದರೆ ಇದಕ್ಕಿಂತ ಅಮಾನವೀಯವಾದುದ್ದು ಏನಿದೆ?  ಸಮವಸ್ತ್ರದ ಹೆಸರಲ್ಲಿ ವಿದ್ಯಾರ್ಥಿಗಳ ಮನಸಲ್ಲಿ ದ್ವೇಷ ತುಂಬಿ ಅವರ ಭವಿಷ್ಯ ಹಾಳುಮಾಡಲು ಹೊರಟಿದ್ದಾರೆ. ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುವ ಮೂಲಕ ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ಹರಿಹಾಯ್ದರು.

Key words: hijab Controversy-former CM- Siddaramaiah