Monday, September 21, 2026

BDA Apartments

ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ BDA JK_Adv BDA Adv
Home Front Page ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ.

ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ.

ಉಡುಪಿ,ಫೆಬ್ರವರಿ,13,2022(www.justkannada.in): ನಾಳೆಯಿಂದ ಪ್ರೌಢಶಾಲಾ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಫೆಬ್ರವರಿ 19ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಹಿಜಾಬ್ ವಿವಾದ ಮತ್ತು ನಾಳೆಯಿಂದ ರಾಜ್ಯದಲ್ಲಿ ಫ್ರೌಢಶಾಲಾ ತರಗತಿಗಳು ಆರಂಭವಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ udupi

ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ. ಪ್ರತಿಭಟನೆ ಮೆರವಣಿಗೆಗೆ ಅವಕಾಶ ಇರುವುದಿಲ್ಲ  ಜಾತಿ ಧರ್ಮದ ವಿರುದ್ಧ ನಡೆದುಕೊಳ್ಳುವಂತಿಲ್ಲ. ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Key words: Prohibition-issued-Udupi -district.