Thursday, August 13, 2026

BDA Apartments

Home Front Page ಸಚಿವ ಈಶ್ವರಪ್ಪ ರಾಜೀನಾಮೆಗೆ ಪಟ್ಟು: ಪರಿಷತ್ ನಲ್ಲಿ ಮುಂದುವರೆದ ಕಾಂಗ್ರೆಸ್ ಧರಣಿ.

ಸಚಿವ ಈಶ್ವರಪ್ಪ ರಾಜೀನಾಮೆಗೆ ಪಟ್ಟು: ಪರಿಷತ್ ನಲ್ಲಿ ಮುಂದುವರೆದ ಕಾಂಗ್ರೆಸ್ ಧರಣಿ.

ಬೆಂಗಳೂರು,ಫೆಬ್ರವರಿ,17,2022(www.justkannada.in):  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರ ಧರಣಿ ಮುಂದುವರೆದಿದೆ.

ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು ಹಿಡಿದಿದ್ದು ನಿನ್ನೆಯಿಂದಲೇ ಸಹ ಸದನದಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ರಾಜೀನಾಮೆ ನೀಡದಿದ್ದರೇ ಅಹೋರಾತ್ರಿ ಧರಣಿಗೂ ಕಾಂಗ್ರಸ್ ಮುಂದಾಗಿದೆ.

ನಿನ್ನೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು.ಇನ್ನು ಇದೀಗ ಪರಿಷತ್ ನಲ್ಲಿ ‘ಕೈ’ ಸದಸ್ಯರ ಪ್ರತಿಭಟನೆ ಮುಂದುವರೆದಿದ್ದು, ಸದನದ ಬಾವಿಗಳಿದು ಭಿತ್ತಿಪತ್ರ ಹಿಡಿದು ಪ್ರತಿಭಟನೆ ಮುಂದುವರೆಸಿದ್ದಾರೆ. ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹದ ಕೇಸ್ ಹಾಕುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಸದಸ್ಯರ ಧರಣಿ ಹಿನ್ನೆಲೆ ಕಲಾಪವನ್ನ ಮಧ್ಯಾಹ್ನ 3ಗಂಟೆಗೆ ಮುಂದೂಡಲಾಗಿದೆ.

Key words: Minister- KS eswarappa –congress-protest.