Thursday, August 13, 2026

BDA Apartments

Home Front Page ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಸರ್ಕಾರದ ವಿರುದ್ದ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಕಿಡಿ: ರಾಜ್ಯಪಾಲರ ನಡೆಯ...

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಸರ್ಕಾರದ ವಿರುದ್ದ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಕಿಡಿ: ರಾಜ್ಯಪಾಲರ ನಡೆಯ ಬಗ್ಗೆಯೂ ಟೀಕೆ…

ಬೆಂಗಳೂರು,ಆ,3,2019(www.justkannada.in):  ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಚಿವ ಸಂಪುಟ ವಿಸ್ತರಣೆ ವಿಳಂಬ ಮಾಡುತ್ತಿರುವ ಹಿನ್ನೆಲೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ಟೀಕಿಸಿದ್ದಾರೆ.

 ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿ.ಎಸ್. ಯಡಿಯೂರಪ್ಪ  ಮತ್ತು ಬಿಜೆಪಿ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವಿಟ್ ಮಾಡಿಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ,ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ? ಎಂದು ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ

 ಅದೇ ರೀತಿ ರಾಜ್ಯಪಾಲರ ನಡೆಯ ಬಗ್ಗೆಯೂ ಟೀಕಿಸಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Key words: Siddaramaiah – outrage – Twitter – government’s- delay -cabinet expansion