Monday, September 28, 2026

BDA Apartments

Home Front Page ವಿಪಕ್ಷಗಳು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ.

ವಿಪಕ್ಷಗಳು ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ.

ಬೆಂಗಳೂರು,ಫೆಬ್ರವರಿ,18,2022(www.justkannada.in): ರಾಜ್ಯದ ಶಾಲಾ ಕಾಲೇಜುಗಳಲ್ಲಿ ಇತ್ತೀಚೆಗೆ ಕೆಲ ಬೆಳವಣಿಗೆಗಳು ನಡೆದಿವೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣ ಮಾಡಬೇಕು. ಆದರೆ ಹಿಜಾಬ್ ವಿಚಾರದಲ್ಲಿ ವಿಪಕ್ಷಗಳು ವಿದ್ಯಾರ್ಥಿಗಳ ಭವಿಷ್ಯ ಹಾಳುಮಾಡುತ್ತಿದೆ ಎಂದು  ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ವಿಧಾನಸಭೆಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಕಾಂಗ್ರೆಸ್ ರಾಜಕೀಯ ಲಾಭ ಪ್ರತಿಷ್ಟೆಗಾಗಿ ಪ್ರತಿಭಟನೆ ನಡೆಸುತ್ತಿದೆ.  ವಿಪಕ್ಷ ತನ್ನ ಜವಾಬ್ದಾರಿ ಮರೆತಿದೆ.  ಇದು ಕಾಂಗ್ರೆಸ್ ರಾಜಕೀಯ ದಿವಾಳಿತನ. ಶಾಲಾ ಕಾಲೇಜುಗಳಲ್ಲಿ ಕೆಲ  ಬೆಳವಣಿಗೆ ನಡೆದಿವೆ.  ಹೈಕೋರ್ಟ್ ಮಧ್ಯಾಂತರ ತೀರ್ಪು ನೀಡಿದೆ. ಈ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದರು.

ಕೇಸರಿ ಧ್ವಜ ಹಾರಿಸಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಲ್ಲ. ಆದರೂ ಕಲಾಪಕ್ಕೆ ಅಡ್ಡಿಪಡಿಸವುದು ಸರಿಯಲ್ಲ.  ರಾಜ್ಯದ ಜನ ರೈತರಿಗಾಗಿ ಕಾಂಗ್ರೆಸ್  ಪ್ರತಿಭಟನೆ ನಡೆಸುತ್ತಿಲ್ಲ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Key words: congress- students-  CM -Basavaraja Bommai