Sunday, August 23, 2026

BDA Apartments

Home Front Page ಈಶ್ವರಪ್ಪ ವಜಾ ಮಾಡುವವರೆಗೂ ಹೋರಾಟ ನಿಲ್ಲಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಈಶ್ವರಪ್ಪ ವಜಾ ಮಾಡುವವರೆಗೂ ಹೋರಾಟ ನಿಲ್ಲಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆಬ್ರವರಿ 20, 2022 (www.justkannaa.in): ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವವರೆಗೂ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಕ್ಷಮೆ ಕೇಳುವುದೆಲ್ಲಾ ಬೇಕಾಗಿಲ್ಲ. ಅವರ ರಾಜೀನಾಮೆ ನೀಡಲೇಬೇಕೆಂದು ಶಿವಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ದೇಶದ್ರೋಹಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವವರೆಗೂ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಹೋರಾಟ ಎಂದಿಗೂ ನಿಲ್ಲುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಸ್ಪಷ್ಟಪಡಿಸಿದ್ದಾರೆ.