Friday, October 16, 2026

Dasara Wishes

Happy Dasara
Home Crime ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ವಿದ್ಯಾರ್ಥಿನಿ ಪೋಷಕರ ಹೋಟೆಲ್ ಮೇಲೆ ದುಷ್ಕರ್ಮಿಗಳ ದಾಳಿ

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ವಿದ್ಯಾರ್ಥಿನಿ ಪೋಷಕರ ಹೋಟೆಲ್ ಮೇಲೆ ದುಷ್ಕರ್ಮಿಗಳ ದಾಳಿ

ಉಡುಪಿ, ಫೆಬ್ರವರಿ 22, 2022 (www.justkannada.in): ಹಿಜಾಬ್‌ ಪರ ವಿರುದ್ಧದ ಹೋರಾಟ ವಿಕೋಪಕ್ಕೆ ತಿರುಗುತ್ತಿದೆ.

ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿ ಹಾಜ್ರಾ ಶಿಫಾ ಪೋಷಕರು ನಡೆಸುತ್ತಿರುವ ಮಲ್ಪೆಯ ಬಿಸ್ಮಿಲ್ಲ ಹೋಟೆಲ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಹಾಜ್ರಾ ಸಹೋದರ ಸೈಫ್ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಉಡುಪಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಹೋಟೆಲ್‌ನ ಕಿಟಕಿ ಗಾಜುಗಳನ್ನು ಒಡೆದು ಹಾಕಲಾಗಿದೆ‌.

ಈ ಸಂಬಂಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.