Friday, October 16, 2026

Dasara Wishes

Happy Dasara
Home Front Page ಶಾಂತಿ ಕದಡುವುದಕ್ಕಾಗಿಯೇ ಈಶ್ವರಪ್ಪ ಶಿವಮೊಗ್ಗಕ್ಕೆ ಹೋಗಿದ್ದಾರೆ: ಬಿ.ಕೆ.ಹರಿಪ್ರಸಾದ್ ಆರೋಪ

ಶಾಂತಿ ಕದಡುವುದಕ್ಕಾಗಿಯೇ ಈಶ್ವರಪ್ಪ ಶಿವಮೊಗ್ಗಕ್ಕೆ ಹೋಗಿದ್ದಾರೆ: ಬಿ.ಕೆ.ಹರಿಪ್ರಸಾದ್ ಆರೋಪ

ಶಿವಮೊಗ್ಗ, ಫೆಬ್ರವರಿ 22, 2022 (www.justkannada.in): ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಸಂಬಂಧ ಶಾಂತಿ ಕದಡುವುದಕ್ಕಾಗಿಯೇ ಈಶ್ವರಪ್ಪ ಅಲ್ಲಿಗೆ ಹೋಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ.

ಈ ಕಾರಣದಿಂದಾಗಿಯೇ ಹೇಳಿಕೆ ಕೂಡ ನೀಡುತ್ತಿದ್ದಾರೆ. ಈಶ್ವರಪ್ಪ ಏನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾ? ಕ್ಷಣಕ್ಕೊಂದು ಹೇಳಿಕೆ ನೀಡುವ ಮೂಲಕ ಶಿವಮೊಗ್ಗ ನಗರದಲ್ಲಿ ಶಾಂತಿ ಕದಡುತ್ತಿದ್ದಾರೆ. ಅವರ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ಖಂಡಿಸಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಏನಾಗಿದೆ ಎಂದು ಅವರು ಹೇಳುತ್ತಾರೆ. ಅದಕ್ಕೂ ಮುನ್ನವೇ ಈಶ್ವರಪ್ಪ ಶಾಂತಿ ಕದಡುವಂತ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.