Saturday, August 8, 2026

BDA Apartments

Home Front Page ಯಡಿಯೂರಪ್ಪ, ಅಜೀಂ ಪ್ರೇಮ್ ಜೀಗೆ ಬೆಂಗಳೂರು ಪ್ರೆಸ್ ಕ್ಲಬ್‌ನಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

ಯಡಿಯೂರಪ್ಪ, ಅಜೀಂ ಪ್ರೇಮ್ ಜೀಗೆ ಬೆಂಗಳೂರು ಪ್ರೆಸ್ ಕ್ಲಬ್‌ನಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

ಬೆಂಗಳೂರು, ಫೆಬ್ರವರಿ 24, 2022: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರೆಸ್ ಕ್ಲಬ್  ಬೆಂಗಳೂರು ವತಿಯಿಂದ ಆಯೋಜಿಸಿದ್ದ 2020 ಮತ್ತು 2021 ನೇ ಸಾಲಿನ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಅಜೀಂ ಪ್ರೇಮ್ ಜಿ ಅವರಿಗೆ ವಾರ್ಷಿಕ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಿದರು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್ ಅವರಿಗೆ ವಿಶೇಷ ಪ್ರಶಸ್ತಿ ಪ್ರದಾನ ಮಾಡಿದರು.

ಯಡಿಯೂರಪ್ಪ ಅವರಿಗೆ ಚಿತ್ರ ನಟ ಸುದೀಪ್ ಅವರಿಗೆ ವಿಶೇಷ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಯಡಿಯೂರಪ್ಪ ಹಾಗೂ ಸುದೀಪ ಪ್ರಶಸ್ತಿ ಪ್ರದಾನ‌ ಮಾಡಿದರು. ೨೦೨೦ ಹಾಗೂ ೨೦೨೧ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಕಾರ್ಯದರ್ಶಿ ಹೆಚ್.ವಿ.ಕಿರಣ್ ಉಪಸ್ಥಿತರಿದ್ದರು.