Tuesday, August 11, 2026

BDA Apartments

Home Front Page ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡಲು ವಿದೇಶಾಂಗ ಸಚಿವ ಜೈಶಂಕರ್ ಗೆ ಸಿಎಂ ಬೊಮ್ಮಾಯಿ...

ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡಲು ವಿದೇಶಾಂಗ ಸಚಿವ ಜೈಶಂಕರ್ ಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು,ಫೆಬ್ರವರಿ,25,2022(www.justkannada.in):  ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಯುದ್ಧ  ಸಾರಿರುವ ಹಿನ್ನೆಲೆ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಿಸಿ ವಾಪಸ್ ಕರೆತರಲು ಮುಂದಾಗುವಂತೆ ವಿದೇಶಾಂಗ ಸಚಿವ ಜೈ ಶಂಕರ್ ಗೆ  ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ಸಂಬಂಧ ವಿದೇಶಾಂಗ ಸಚಿವ ಜೈಶಂಕರ್  ಅವರಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿರುವ ಸಿಎಂ ಬಸವರಾಜ ಬೊಮ್ಮಾಯಿ,  ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಮನವಿ ಮಾಡಿದ್ದಾರೆ.

ಈ ವೇಳೆ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರುವ ಬಗ್ಗೆ ಸಿಎಂಗೆ ವಿದೇಶಾಂಗ ಸಚಿವ ಜೈ ಶಂಕರ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Key words: CM Bommai-central- Minister-Jaishankar