Sunday, August 23, 2026

BDA Apartments

Home Crime ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 10 ಮಂದಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: 10 ಮಂದಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

ಶಿವಮೊಗ್ಗ,ಫೆಬ್ರವರಿ,25,2022(www.justkannada.in): ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳನ್ನ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು 11 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಶಿವಮೊಗ್ಗ 2ನೇ ಜೆ ಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹರ್ಷ ಹತ್ಯೆ ಪ್ರಕರಣ ತನಿಖೆಗೆ ರಚನೆಗೊಂಡಿದ್ದ ವಿಶೇಷ ಪೊಲೀಸ್ ತಂಡ ನಿನ್ನೆ ಅಬ್ದುಲ್ ರೋಷನ್ ಹಾಗೂ ಜಾಫರ್ ಸಾಧಿಕ್ ಅಲಿಯಾಸ್ ಬದ್ರುದ್ದೀನ್ ಎಂಬ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿತ್ತು. ಈ ಮೂಲಕ ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆಗೆ ಬಳಸಿದ್ದ 2 ಕಾರು ವಶಕ್ಕೆ ಪಡೆಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತ ಎಲ್ಲಾ 10 ಆರೋಪಿಗಳನ್ನು ಮಾರ್ಚ್ 7ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಶಿವಮೊಗ್ಗ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನು ಹರ್ಷ ಹತ್ಯೆಯಾದ ಬಳಿಕ ಶಿವಮೊಗ್ಗ ನಗರದಲ್ಲಿ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

Key words: Harsha-Murder-case-custody – 10 accused