Wednesday, August 12, 2026

BDA Apartments

Home Front Page ಮೃತ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಿಎಂ ಬೊಮ್ಮಾಯಿ

ಮೃತ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಿಎಂ ಬೊಮ್ಮಾಯಿ

ಹಾವೇರಿ,ಮಾರ್ಚ್,5,2022(www.justkannada.in):  ಉಕ್ರೇನ್ ನಲ್ಲಿ   ರಷ್ಯಾದಾಳಿಗೆ ಬಲಿಯಾದ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಣಿಬೆನ್ನೂರು ತಾಲ್ಲೂಕಿನ ಚಳಗೇರಿಯಲ್ಲಿರುವ ವೈದ್ಯ ವಿದ್ಯಾರ್ಥಿ ನವೀನ್ ಅವರ  ನಿವಾಸಕ್ಕೆ ಭೇಟಿ ನೀಡಿ  ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು.

ಇದೇ ಸಂದರ್ಭದಲ್ಲಿ ನವೀನ ಅವರ ತಂದೆ ಶೇಖರಗೌಡ ಗ್ಯಾನಗೌಡರ್ ಅವರಿಗೆ 25 ಲಕ್ಷ ರುಪಾಯಿ ಪರಿಹಾರದ ಚೆಕ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ವಿತರಿಸಿದರು.

ಈ ಸಂದರ್ಭದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಶ್ರೀಗಳು, ಕೃಷಿ ಸಚಿವ ಬಿಸಿ ಪಾಟೀಲ್ , ಸಂಸದ ಶಿವಕುಮಾರ್ ಉದಾಸಿ, ಶಾಸಕ ಪ್ರೊ ಎಸ್ ವಿ ಸಂಕನೂರ್ ಮತ್ತು ಇತರರು ಉಪಸ್ಥಿತರಿದ್ದರು.

Key words: 25 lakh-Naveen- family -CM Bommai -compensation