Wednesday, August 12, 2026

BDA Apartments

Home Front Page ಉಕ್ರೇನ್’ನಿಂದ ತವರಿಗೆ ಮರಳಿದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ

ಉಕ್ರೇನ್’ನಿಂದ ತವರಿಗೆ ಮರಳಿದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ

ಧಾರವಾಡ, ಮಾರ್ಚ್ 06, 2022 (www.justkannada.in): ಉಕ್ರೇನಿಂದ ಮರಳಿ ತವರಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ವಾಗತ ನೀಡಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಉಕ್ರೇನ್‌ನಿಂದ ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ.

ಉಕ್ರೇನ್‌ನಲ್ಲಿ ಕರ್ನಾಟಕದ ಇನ್ನೂ 200 ಜನರು ಸಿಲುಕಿದ್ದಾರೆ. ಈ ನಡುವೆ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಆಗಮಿಸಿದರು.

ಈ ವೇಳೆ ಉತ್ತರ ಕರ್ನಾಟಕ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿನಿಗೆ ಸ್ವಾಗತ ಕೋರಿದ್ದಾರೆ.