Tuesday, August 4, 2026

BDA Apartments

Home Front Page ಚಾಮುಂಡೇಶ್ವರಿ ಕ್ಷೇತದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ

ಚಾಮುಂಡೇಶ್ವರಿ ಕ್ಷೇತದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು, ಮಾರ್ಚ್ 13, 2022 (www.justkannada.in): ನಾನು ಚಾಮುಂಡೇಶ್ವರಿ ಕ್ಷೇತದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ‌. ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲ್ಲು ಹೇಳುತ್ತಿದ್ದಾರೆ. ಆದರೆ ಈವರೆಗೂ ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇಂದು ಮಂಡ್ಯದ ಮದ್ದೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಜೆ.ಡಿಎಸ್ ಜೊತೆ ಅಲೈಯನ್ಸ್ ಆದ್ರು ಮಾಡ್ಕೊಳ್ಳಿ. ಅಂಡ್ರಸ್ಟ್ಯಾಂಡಿಗಾದ್ರು ಮಾಡ್ಕೊಳ್ಳಿ. ಮ್ಯಾಚ್ ಫಿಕ್ಸಿಂಗ್ ಆದ್ರು ಮಾಡ್ಕೊಳ್ಳಿ. ನಾವು ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ.

ಮುಂದೆ‌ ಕಾಂಗ್ರೆಸ್ ಅಧಿಕಾರಕ್ಕೆ ತರುವುದೆ ನಮ್ಮ ಗುರಿ. ನಾನು‌ ಕಾಂಗ್ರೆಸ್ ನಲ್ಲಿ ನೆಮ್ಮದಿಯಾಗಿದ್ದೇನೆ. ರಾಜಕಾರಣದಲ್ಲಿ ಆಸೆಗಳಿರಬೇಕು ಆದ್ರೆ ದುರಾಸೆ ಇರಬಾರದು ಎಂದು ತಿಳಿಸಿದರು.

not contesting again in Chamundeshwari Kshetra says Former CM Siddaramaiah