Tuesday, September 15, 2026

BDA Apartments

ಜೇಮ್ಸ್ ಚಿತ್ರಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ: ನಟ ಶಿವಣ್ಣ ಭೇಟಿ ಬಳಿಕ ಸಿಎಂ ಬ...
Home Front Page  ಜೇಮ್ಸ್ ಚಿತ್ರಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ: ನಟ ಶಿವಣ್ಣ ಭೇಟಿ ಬಳಿಕ ಸಿಎಂ ಬೊಮ್ಮಾಯಿ...

 ಜೇಮ್ಸ್ ಚಿತ್ರಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ: ನಟ ಶಿವಣ್ಣ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಭರವಸೆ.

ಬೆಂಗಳೂರು,ಮಾರ್ಚ್,24,2022(www.justkannada.in): ಜೇಮ್ಸ್ ಚಿತ್ರಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ. ಫಿಲಂ ಚೇಂಬರ್ ಅಧ್ಯಕ್ಷರ ಜತೆ ಮಾತನಾಡಿದ್ದೇನೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ನಟ ಶಿವರಾಜ್ ಕುಮಾರ್ ದಂಪತಿ ಭೇಟಿ ಜತೆ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು,  ಚಿತ್ರಕ್ಕೆ ಎಲ್ಲಾ ರೀತಿಯ ಬೆಂಬಲ ನೀಡುವುದಾಗಿ ಹೇಳೀದ್ದೇನೆ.  ಸಮಸ್ಯೆ ಬಗೆಹರಿಸುವಂತೆ ವಾಣಿಜ್ಯ ಮಂಡಳಿಗೆ ಸೂಚನೆ ನೀಡಿದ್ದೇನೆ. ಶಿವರಾಜ್ ಕುಮಾರ್ ನಿರ್ಮಾಪಕರ ಜತೆಗೂ ಮಾತನಾಡಿದ್ದೇನೆ. ಜೇಮ್ಸ್ ಗೆ ಸಮಸ್ಯೆ ಆಗದಂತೆ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಫಿಲಂ ಚೇಂಬರ್ ನಿರ್ಧಾರಕ್ಕೆ ಸರ್ಕಾರದ ಬೆಂಬಲ ಇದೆ ಎಂದರು.ಜೇಮ್ಸ್ ಚಿತ್ರಕ್ಕೆ ಯಾವುದೇ ಅಡ್ಡಿ ಆತಂಕ ಇಲ್ಲ james

ಏಪ್ರಿಲ್  2ನೇ ವಾರದಲ್ಲಿ ಶಕ್ತಿಧಾಮ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ಇದೆ. ಉದ್ಘಾಟನೆಗೆ ಬರುವಂತೆ  ಶೀವರಾಜ್ ಕುಮಾರ್ ದಂಪತಿ ಆಹ್ವಾನ ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words:  CM Bommai – meeting -actor –Shivaraj kumar