Sunday, August 23, 2026

BDA Apartments

Home Front Page ಕರ್ನಾಟಕಕ್ಕೆ ಅಮಿತ್ ಶಾ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಕರ್ನಾಟಕಕ್ಕೆ ಅಮಿತ್ ಶಾ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಬೆಂಗಳೂರು, ಮಾರ್ಚ್ 26, 2022 (www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1ರಂದು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ.

ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ಅವರು ರಾಜ್ಯದಲ್ಲಿ ಕೇಸರಿ ಪಕ್ಷದ ಪ್ರಚಾರವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಹೀಗಾಗಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ರಾಜ್ಯದ ಪ್ರಮುಖ ಲಿಂಗಾಯತ ಧಾರ್ಮಿಕ ಸಂಸ್ಥೆಯಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ 116ನೇ ಜಯಂತಿಯಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ಇದೇ ವೇಳೆ ಕರ್ನಾಟಕದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸುವ ಸಾಧ್ಯತೆ ಇದೆ.