Wednesday, September 16, 2026

BDA Apartments

Home Front Page ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಮಾರ್ಚ್,28,2022(www.justkannada.in):  ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೂ ನನ್ನ ಶುಭ ಹಾರೈಕೆಗಳು. ಶೈಕ್ಷಣಿಕ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಅತ್ಯಂತ ಪ್ರಮುಖ ಘಟ್ಟ. ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂಬುದು ನನ್ನ ಕಳಕಳಿ.

ಎಲ್ಲ ಸಮುದಾಯಗಳ ಮಕ್ಕಳು ತಮ್ಮ ಭಾವನೆಗಳನ್ನು ಬದಿಗಿರಿಸಿ ಪರೀಕ್ಷೆ ಬರೆಯಬೇಕು. ಯಾವುದೇ ಕಾರಣಕ್ಕೂ ಪರೀಕ್ಷೆ ತಪ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಮಕ್ಕಳ ಭಾವನೆಗಳನ್ನು ಗೌರವಿಸಿ ಉಂಟಾಗಿರುವ ತ್ವೇಷಮಯ ವಾತಾವರಣವನ್ನು ತಿಳಿಗೊಳಿಸುವ ಸಂದರ್ಭ ಬಂದೇ ಬರುತ್ತದೆ ಎಂದಿದ್ದಾರೆ.

ಹಾಗೆಯೇ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ದೇಶಕ್ಕೆ ಅನ್ಯಾಯ ಮಾಡಿದಂತೆ. ʼಬೇಟಿ ಬಚಾವೋ, ಬೇಟಿ ಪಡಾವೋʼ ಕಾರ್ಯಕ್ರಮ ಕೇವಲ ಕಾಗದ ಮೇಲೆ ಅಥವಾ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದು. ಹೆಣ್ಣುಮಗುವಿಗೆ ಶಿಕ್ಷಣ ಕೊಡದಿದ್ದರೆ ದೇಶವನ್ನು ಕತ್ತಲೆಗೆ ದೂಡಿದಂತೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಟ್ವೀಟ್ ಮಾಡಿದ್ದಾರೆ.

Key words: SSLC-exam-  Former CM -HD Kumaraswamy.